ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಪಾಪೆಮಜಲು ಕೋಟಿ-ಚೆನ್ನಯ ಗೆಳೆಯರ ಬಳಗ ಪಾಪೆಮಜಲು, ರೋಟರಿ ಕ್ಯಾಂಫ್ಕೋ ಬಡ್ಲ್ ಸೆಂಟರ್, ಮತ್ತು ಅರಿಯಡ್ಕ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ಮೊಂತೇರೊ ಶಿಬಿರ ಉದ್ಘಾಟಿಸಿ, ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ವೈದ್ಯಾಧಿಕಾರಿ ಡಾ. ಸೀತಾರಾಮ್ ಭಟ್, ರಕ್ತದಾನದ ಮಹತ್ವ, ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು.
ಪಾಪೆಮಜಲು ಕೋಟಿ-ಚೆನ್ನಯ ಗೆಳೆಯರ ಬಳಗದ ಜಗದೀಶ್ ಬಿ. ಅಧ್ಯಕ್ಷತೆ ವಹಿಸಿದ್ದರು. ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ ಸ್ವಾಗತಿಸಿ, ಅರುಣ್ ಫೆರ್ನಾಂಡಿಸ್ ವಂದಿಸಿದರು
ಹಲವರು ನಾಗರಿಕರು ಬಂದು ರಕ್ತದಾನ ಮಾಡಿದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ದೀಕ್ಷಿತ್ ಕುಮಾರ್ ರೈ ಬಿ ಮಂಜುನಾಥ್ ಪಿ ವಿ ನಾಯ್ಕ ಶಿವ ಕಾರ್ತಿಕ್ ಕಾರ್ಯಕ್ರಮ ನಿರೂಪಿಸಿದರು.