ಹುಬ್ಬಳ್ಳಿ : ಮನೆ ಬಾಗಿಲಿಗೇ ಆರೋಗ್ಯ ಸೇವೆ ಪೂರೈಸುವ ಕುರಿತು ರಾಜ್ಯ ಸರಕಾರ ಜನತೆಗೆ ಸಿಹಿ ಸುದ್ದಿ ನೀಡಿದೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ. ಗುಣಮಟ್ಟದ ಚಿಕಿತ್ಸೆ, ಆರೋಗ್ಯ ಜಾಗೃತಿ ಜೊತೆ ಆರಂಭದಲ್ಲಿಯೇ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗಿದೆ.ಯೋಜೆನಯಡಿ ಬೆಳಗಾವಿ, ಗದಗ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಆರೋಗ್ಯ ಸಿಬ್ಬಂದಿ ಪ್ರತಿ ಮನೆಗೆ ತೆರಳಿ ಪ್ರಾಥಮಿಕ ಸ್ಟ್ರೀನಿಂಗ್ ನಡೆಸಲಿದ್ದಾರೆ. ಮಧುಮೇಹ, ಕ್ಯಾನ್ಸರ್ ಸೇರಿದಂತೆ ವಿವಿಧ ಬಗೆಯ ರೋಗಗಳ ಸ್ಟ್ರೀನಿಂಗ್ ನಡೆಸಿ ಉತ್ತಮ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.