ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು.
ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆಯ ಹೆಚ್ಚಳ ನೀಡಿ ತಕ್ಷಣ ಸ್ಕ್ಯಾನ್ ಆ್ಯಂಡ್ ಶೇರ್ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ ನೀಡಿದರು. ರೋಗಿಗಳು ಸ್ಕ್ಯಾನ್ ಮಾಡಿ ಟೋಕನ್ ವ್ಯವಸ್ಥೆ ಪಡೆದುಕೊಳ್ಳಬಹುದು. ಇದರಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಾಯುವ ಪರಿಸ್ಥಿತಿ ತಪ್ಪಲಿದೆ.
ಈಗಾಗಲೇ ಆಸ್ಪತ್ರೆಯಲ್ಲಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿರುವ ಕುರಿತು ಅವರ ಗಮನಕ್ಕೆ ತರಲಾಯಿತು. ಬಳಿಕ ಆಸ್ಪತ್ರೆ, ಓಪಿಡಿ, ವೈದ್ಯಕೀಯ ಕೊಠಡಿ, ಡಯಲಿಸೀಸ್ ಕೇಂದ್ರಗಳಿಗೆ ಭೇಟಿ ನೀಡಿದರು.
ಪದವೀಧರ ಕ್ಷೇತ್ರದ ಚುನಾವಣೆಗೆ ಚುನಾವಣಾ ಅಬ್ಸರ್ವರ್ ಆಗಿರುವ ಅವರು ಚುನಾವಣಾ ಪ್ರಕ್ರಿಯೆ ವೀಕ್ಷಣೆಯ ಜತೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ತಹಸೀಲ್ದಾರ್ ಕುಂಞಿ ಅಹಮ್ಮದ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಆಸ್ಪತ್ರೆ ಆಡಳಿತಾಧಿಕಾರಿ ಡಾ. ಆಶಾ ಪುತ್ತೂರಾಯ ಮೊದಲಾದವರು ಉಪಸ್ಥಿತರಿದ್ದರು.