ಕಡಬ : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಫೆ.1 ರಿಂದ 3 ರ ತನಕ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಫೆ.2 ಗುರುವಾರ ಬೆಳಿಗ್ಗೆ 7 ರಿಂದ ಮಹಾಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಸಂಹಾರ ತತ್ತ್ವಹೋಮ, ತತ್ತ್ವಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ಧ್ಯಾನ ಸಂಕೋಚಕ್ರಿಯೆ, ಜೀವಕಲಶ ಪೂಜೆ, ಜೀವೋದ್ವಾಸನ, ಶಯ್ಯಾ ಪೂಜೆ, ಪ್ರಸಾದ ವಿತರಣೆ, ಸಂಜೆ 5.00 ರಿಂದ ಧ್ಯಾನಾಧಿವಾಸ ಕ್ರಿಯೆ, ಅಧಿವಾಸ ಹೋಮ ನಡೆಯಲಿದೆ.
ಫೆ.3 ಶುಕ್ರವಾರ ಬೆಳಿಗ್ಗೆ 7 ರಿಂದ ಮಹಾಗಣಪತಿ ಹೋಮ, 9.18 ರಿಂದ 10.10 ರ ತನಕ ನಡೆಯುವ ಮೀನ ಲಗ್ನದ ಶುಭ ಮುಹೂರ್ತದಲ್ಲಿ “ಬಾಲಾಲಯ ಪ್ರತಿಷ್ಠೆ, ಕಲಶಾಭಿಷೇಕ ನಡೆದು, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆಯಾಗಲಿದೆ.
ಕಾರ್ಯಕ್ರಮದಲ್ಲಿ ಫೆ.2 ರಂದು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ, ಫೆ.3 ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.