ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ | ಪ್ರಕರಣ ದಾಖಲು

ಮಂಗಳೂರು : ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ರಿ (39) ಹಲ್ಲೆಗೊಳಗಾದವರು.

ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.





















































 
 

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ನಿನ್ನ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ, ಚರಂಡಿಗೆ ದೂಡಿ ಹಾಕಿದ ಪರಿಣಾಮ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top