ನೆಲ್ಯಾಡಿ: ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ. 5ರಂದು ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ (48) ಎಂದು ಗುರುತಿಸಲಾಗಿದೆ. ಅವರು ಬೈಕ್‌ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರವಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
























