ಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕೇಂದ್ರ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು.
ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೇಗೌಡರಿಗೆ ಅರುಣ್ ಕುಮಾರ್ ಪುತ್ತಿಲ ಶುಭಹಾರೈಸಿದರು.
ಈ ಸಂದರ್ಭ ಬಿಜೆಪಿ ಶಾಸಕರಾದ ಚೆನ್ನಬಸಪ್ಪ, ಉಡುಪಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಹಿತ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
























