ಕಾಪು : ಬೀಚ್ ಬಲಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು-ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.
ಗುರುವಾರ ಸಂಜೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ (20) ರವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಈ ಬಗ್ಗೆ ತಂದೆ ತುಳಸಿ ಸಾಲ್ಯಾನ್ ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.
ಸ್ಥಳೀಯರು, ಈಜುಗಾರರು ಶುಕ್ರವಾರ ಬೆಳಗಿನಿಂದಲೇ ಸಮುದ್ರದಲ್ಲಿ ಹುಡುಕಾಟ ನಡೆಸಿದ್ದು, ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ.
ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.