ಪುತ್ತೂರು: ಭಾನುವಾರ ಸುರಿದ ಭಾರೀ ಗಾಳಿ ಮಳೆಗೆ ನಗರದ ಬಪ್ಪಳಿಗೆಯಲ್ಲಿ ಮೇ ಫ್ಲವರ್ ಮರ ಧರಾಶಾಹಿಯಾದ ಪರಿಣಾಮ 11 ಕರೆಂಟ್ ಕಂಬಗಳು ನೆಲಕ್ಕುರುಳಿವೆ.
ಜನನಿಬಿಡ ಪ್ರದೇಶದಲ್ಲೇ ಇದ್ದ ಭಾರೀ ಗಾತ್ರದ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಉರುಳಿ ಬಿದ್ದುದಲ್ಲದೆ ವಾಹನ ಸವಾರರು ಕೂದಳೆಳೆ ಅಂತರದಲ್ಲಿ ಬಚಾವಾಗಿದ್ದಾರೆ. ಮರ ಬಿದ್ದ ಪರಿಣಾಮ ಬಲ್ನಾಡು-ವಿಟ್ಲ ರಸ್ತೆ ಸಂಚಾರಕ್ಕೆ ತಡೆ ಉಂಟಾದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ಮನೆಯೊಂದರ ಕಾಂಪೌಂಡ್ ಗೋಡೆಗೆ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕರೆಂಟ್ ಕಂಬ ಸರಿಪಡಿಸುವಂತೆ ಮೆಸ್ಕಾಂ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಸಾರ್ವಜನಿಕರು ಬೃಹತ್ ಮರವನ್ನು ತೆರವುಗೊಳಿಸಿದದರು.