ಯಾತ್ರಾರ್ಥಿಗಳಿದ್ದ ಬಸ್ಸಿನ ಮೆಲೆ ಭಯೋತ್ಪಾದಕರಿಂದ ಗುಂಡಿನ ದಾಳಿ | 9 ಮಂದಿ ಮೃತ್ಯು, 33 ಮಂದಿಗೆ ಗಾಯ

ಶ್ರೀನಗರ:  ಯಾತ್ರಾರ್ಥಿಗಳಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ 9 ಯಾತ್ರಿಕರು ಮೃತಪಟ್ಟು, 33 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.

53 ಆಸನಗಳ ಬಸ್ ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿದ್ದಿದೆ. ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಬಳಿ ಸಂಜೆ 6.15ರ ಸುಮಾರಿಗೆ ಈ ದಾಳಿ ನಡೆದಿದೆ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ ಅವರು ತಿಳಿಸಿದ್ದಾರೆ.

ನೆರೆಯ ಪ್ರದೇಶಗಳಾದ ರಚೌರಿ ಮತ್ತು ಪೂಂಚ್‌ಗೆ ಹೋಲಿಸಿದರೆ ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಡಿಮೆಯಿತ್ತು. ಈ ಘಟನೆಯ ಬಳಿಕ ರಿಯಾಸಿಯಲ್ಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top