ಅಧಿಕಾರ ವಹಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಯೋಜನೆಯ‌ ಹಣ ರೈತರ ಖಾತೆಗೆ

3 ನೇ ಅವಧಿಗೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಲವು ಭರವಸೆಗಳನ್ನು ಜನ ಸರ್ಕಾರದ ಮೇಲಿರಿಸಿದ್ದಾರೆ. ಜೂ.9 ರಂದು ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಕೆಲಸ ಆರಂಭಿಸಿದ್ದಾರೆ. ಪ್ರಧಾನಿ ಕಚೇರಿಗೆ ಆಗಮಿಸುತ್ತಿದ್ದಂತೆ ಮೋದಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿಸಿದ್ದಾರೆ.ಕಿಸಾನ್ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ.

ಮೋದಿಯವರು ತಮ್ಮ ಮೂರನೇ ಅವಧಿಯ ಮೊದಲ ದಿನವೇ ಬರೋಬ್ಬರಿ 9.3 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಜಮೆ ಮಾಡಿದ್ದಾರೆ.

ಸರ್ಕಾರ ರೈತರ ಏಳಿಗೆ ಹಾಗೂ ಬೆಂಬಲಕ್ಕೆ ಸದಾ ನಿಲ್ಲಲಿದೆ ಅನ್ನೋ ಸಂದೇಶ ಸಾರಿದ್ದಾರೆ.ಹಣ ಬಿಡುಗಡೆಯ ಬಳಿಕ ಮಾತನಾಡಿದ ಮೋದಿ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರೈತರ ಕಲ್ಯಾಣಕ್ಕಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top