ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ. ಬ್ರಿಜೇಶ್‍ ಚೌಟ

ಮಂಗಳೂರು: ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನಮ್ಮ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಮತೀಯ ಶಕ್ತಿಗಳು ಮಾರಣಾಂತಿಕ ಹಲ್ಲೆ ನಡೆದಿದ್ದು,  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಎಚ್ಚರಿಕೆ ನೀಡಿದರು







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top