ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ !

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.

ಈ ಪ್ರಕರಣ ಸದ್ಯ ಸೆನ್ಸೆಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು ಎನ್ನಲಾಗಿದೆ.



































 
 

ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top