ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ಮತ್ತು ಉಪ್ಪಿನಂಗಡಿ – ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ಸಪ್ಲ್ಯ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್ಪ್ರೆಸ್ ಫೀಡರ್ನಲ್ಲಿ ಜೂ.13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
33 ಕೆವಿ ಪುತ್ತೂರು-ಕಡಬ ವಿದ್ಯುತ್ ಮಾರ್ಗದ ಮುಂಗಾರು ಪೂರ್ವ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.13ರಂದು ಪೂರ್ವಾಹ್ನ 10 ರಿಂದ ಸಾಯಂಕಾಲ 5 ಗಂಟೆಯವರೆಗೆ 33 ಕೆವಿ ಪುತ್ತೂರು- ಕಡಬ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.
110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಾಗೂ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ನೆಕ್ಕಿಲಾಡಿ ಮತ್ತು ಬಜತ್ತೂರು ಗ್ರಾಮದ ವಿದ್ಯುತ್ ಬಳಕೆದಾರರು ಹಾಗೂ 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.