ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಮಟ್ಟದ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ  ಸಮಾರೋಪಗೊಂಡಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ವಹಿಸಿದ್ದರು. ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಸಿ. ರಾಮಚಂದ್ರ ಭಟ್, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಉಪಾಧ್ಯಕ್ಷೆ ಶೋಭಾ ಚಿದಾನಂದ ಶುಭ ಹಾರೈಸಿದರು.

ಮೈಸೂರು ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೊ. ಡಾ. ಸತೀಶ್, ಎಂ. ಡಿ.ಯಂ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೊಪೇಸರ್ ಡಾ.ಶಿವಕುಮಾ‌ರ್, ಡಾ. ಜಯಂತ್ ವಸಂತ್, ಪ್ರೊಫೆಸರ್ ಸಾಂಗ್ಲಿ, ಮೂಡಬಿದ್ರೆ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲೆ ಡಾ.ಅಪೇಕ್ಷಾ ರಾವ್, ಪರಶಿನಕಡವು ಯಂ.ವಿ.ಆರ್ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ಮುರಳೀಧರನ್ ಎ.ಕೆ. ಅನಿಸಿಕೆ ವ್ಯಕ್ತಪಡಿಸಿದರು.



































 
 

ಕಾರ್ಯಾಗಾರದಲ್ಲಿ ಭಾಗವಹಿಸಿ ದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರುಗಳಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ., ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿ ಡಾ.ಕವಿತಾ ಬಿ.ಯಂ. ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ವಿವಿಧ ರಾಜ್ಯಗಳ ಕಾಲೇಜಿನ 10 ಜನ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ವಿಷಯಗಳ ಬಗ್ಗೆ ತರಬೇತಿಯನ್ನು ನೀಡಲಾಯಿತು. ವಿವಿಧ ರಾಜ್ಯದ ಕಾಲೇಜುಗಳ 60 ಜನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಉಪಸ್ಥಿತರಿದ್ದರು.

ಡಾ. ಕವಿತಾ ಬಿ. ಯಂ. ಸ್ವಾಗತಿಸಿ, ಮರು ದಿನದ ಕಾರ್ಯಾಗಾರದ ವರದಿ ಮಂಡಿಸಿದರು. ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ವಂದಿಸಿದರು. ಡಾ. ಅನುಷ ಎಂ. ಮತ್ತು ಡಾ. ಭಾಗ್ಯವತಿ ಕಾರ್ಯಕ್ರಮ ನಿರೂಪಿಸಿದರು. ಚಿಕ್ಕಲ ಭಾರಧ್ವಜ್ ಮತ್ತು ತಂಡ ಪ್ರಾರ್ಥಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top