ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಅವರ ಹುಟ್ಟುಹಬ್ಬದ ಆಚರಣೆ ಮತ್ತು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ ಕಾಲೇಜಿನಲ್ಲಿ ನಡೆಯಿತು.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಒಂದು ಸಂಸ್ಥೆಯ ರಾಯಭಾರಿಗಳಿದ್ದಂತೆ ಎನ್ನುವುದರ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು,
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪದವಿ ಶಿಕ್ಷಣವನ್ನು ಪಡೆದ ನಂತರ ವಿದ್ಯಾರ್ಥಿಗಳು ಸ್ವತಂತ್ರರಾಗಿ ಜವಾಬ್ದಾರಿಯುತ ಜೀವನವನ್ನು ನಡೆಸುವಂತಾಗಬೇಕು ಎಂದರು.
ವಿದ್ಯಾರ್ಥಿಗಳಾದ ಅಭಿಜ್ಞ, ಸಾಧಿಕ್ ಹಾಗೂ ಶಮೀರ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.. ಕಾಲೇಜಿನ ಪ್ರಾಂಶುಪಾಲ ಡಾ ನಾರಾಯಣಮೂರ್ತಿ ಕೆ., ಇತಿಹಾಸ ವಿಭಾಗದ ಉಪನ್ಯಾಸಕಿ ಪ್ರತಿಭಾ ಎಸ್ ಶುಭ ಹಾರೈಸಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಕೆ ಸೀತಾರಾಮ ರೈ ಸವಣೂರುಇವರ 77 ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ ಶೇಷಗಿರಿ ಎಂ. ಶುಭಹಾರೈಕೆಯ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಸಂಚಾಲಕರ ಧರ್ಮಪತ್ನಿ ಕಸ್ತೂರಿಕಲಾ ರೈ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಉಪಸ್ಥಿತರಿದ್ದರು.
ಫಾತಿಮತ್ ಶಝಾನ ಸ್ವಾಗತಿಸಿ, ಪ್ರಥಮ ಬಿ.ಎ ವಿದ್ಯಾರ್ಥಿನಿ ಕಲ್ಪನಾ ವಂದಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ಶ್ರಾವ್ಯವಾಣಿ ಮತ್ತು ಆಭಿಜ್ಞ ಪ್ರಾರ್ಥನೆ ಹಾಡಿದರು.