ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ತೆಂಕಿಲ ನರೇಂದ್ರ ಪದವಿಪೂರ್ವ ಕಾಲೇಜು ಸಹಕಾರದಲ್ಲಿ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರದಾನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.15 ಶನಿವಾರ ಮಧ್ಯಾಹ್ನ 2.30 ಕ್ಕೆ ತೆಂಕಿಲ ನರೇಂದ್ರ ಪದವಿಪೂರ್ವ ಕಾಲೆಜು ಸಭಾಂಗಣದಲ್ಲಿ ನಡೆಯಲಿದೆ.
ಪುತ್ತೂರು ಶಾಸಕ ಅಶೊಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅಭಿನಂದಿಸುವರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಅಭಿನಂದನಾ ಮಾತುಗಳನ್ನಾಡುವರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ನರೇಂದ್ರ ಪದವಿಪೂರ್ವ ಕಾಲೇಜು ಅಧ್ಯಕ್ಷ ಶ್ರೀಕಾಂತ್ ಕೊಳತ್ತಾಯ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಐ.ಎ.ಎಸ್. ಹಾಗೂ ಐ.ಪಿ.ಎಸ್. ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರವನ್ನು ಡಾ.ಮೈತ್ರಿ ಭಟ್ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.