ಪುತ್ತೂರು: ಕಳೆದ ಲೋಕಸಭಾ ಚುನಾವಣೆಯ ಮೊದಲು ಶಿಲಾನ್ಯಾಸಗೈದ ಕಾಮಗಾರಿಗಳು ಆರಂಭಗೊಂಡಿದ್ದು, ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ಭಾನುವಾರ 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುರಿಯ ಗ್ರಾಮದ ಎನ್ ಆರ್ ಸಿ ಸಿ – ಅಮ್ಮುಂಜ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.
ಆದ್ಯತೆ ಮೇರೆಗೆ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಅಗತ್ಯ ಬೇಡಿಕೆ ಇರುವ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು ಎಂದು ಹೇಳಿದ ಅವರು, ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ಅಭಿವೃದ್ದಿಗೆ 10 ಲಕ್ಷ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.
ಕುರಿಯ ಕಾಂಗ್ರೆಸ್ ಉಸ್ತುವಾರಿ ಶಿವರಾಮ ಆಳ್ವ ಮಾತನಾಡಿ, ಶಾಸಕರು ಕುರಿಯ ಗ್ರಾಮಕ್ಕೆ ಒಂದು ಕೋಟಿಗೂ ಮಿಕ್ಕಿ ಅನುದಾನ ನೀಡಿದ್ದಾರೆ. ಮುಂದಿನ ಬಾರಿಯೂ ಅವರೇ ಶಾಸಕರಾಗಿ ಬರಬೇಕು. ಇದಕ್ಕಾಗಿ ಪ್ರತೀಯೊಬ್ಬರೂ ಅವರಿಗೆ ವೋಟು ಹಾಕುವ ಮೂಲಕ ಕೃತಜ್ಞತೆ ಸಲ್ಲಿಸಬೇಕು. ಬಡವರ ಬಗ್ಗೆ ಅಪಾರ ಕಾಳಜಿ ಇರುವ ಅವರು ನಮ್ಮ ಕ್ಷೇತ್ರದ ಶಾಸಕರಾಗಿರುವುದು ನಮ್ಮ ಭಾಗ್ಯವಾಗಿದೆ ಎಂದು ಹೇಳಿದರು.
ಪಾಲಿಂಜೆ ಶ್ರೀ ವಿಷ್ಣುಮೂರ್ತಿ ದೇವಸ್ತಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಣ್ಣ ನಾಯ್ಕ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಪೂರ್ಣೆಶ್, ಬಾಲಕೃಷ್ಣ , ರೇಖನಾಥ ರೈ, ಎನ್. ಹರೀಶ್, ರಾಮಣ್ಣ ರೈ, ಇಬ್ರಾಹಿಮ್, ಈಶ್ವರ ಗೌಡ ಕಟ್ಟಡಬೈಲು, ಜಗನ್ನಾಥ ಶೆಟ್ಟಿ, ಕಿಟ್ಟಣ್ಣ ರೈ, ಹಸೈನಾರ್, ಅವಿನಾಶ್ ರೈ, ಅಬೂಬಕ್ಕರ್ , ಗೀತ, ಸುಜಾತ ರೈ, ಲಕ್ಷ್ಮಿ, ಮಾನ್ಯ , ಸುಮಿತ್ರಾ, ಭವಾನಿ, ಸುನಂದಾ, ಹಿತೇಶ್ , ಸುಜನ್ ರೈ, ಅವಿನಾಶ್, ವಿಖ್ಯಾತ, ರಿತೇಶ್, ಕೆ.ಗಣೇಶ್, ಪ್ರವೀಣ್ ಕುಮಾರ್, ಸುಕುಮಾರ್, ಅನುರಾಧ, ಸುಧಾಕರ್ ಮತ್ತಿತರರು ಉಪಸ್ತಿತರಿದ್ದರು.
ಗ್ರಾಪಂ ಸದಸ್ಯ ನೇಮಾಕ್ಷ ಸುವರ್ಣ ಸ್ವಾಗತಿಸಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ಸನತ್ ರೈ ವಂದಿಸಿದರು. ಪುತ್ತೂರು ಸೇವಾದಳದ ಅಧ್ಯಕ್ಷ ವಿಶ್ವಜಿತ್ ಕಾರ್ಯಕ್ರಮ ನಿರೂಪಿಸಿದರು.