ಉಪ್ಪಿನಂಗಡಿ: ಮಹಿಳೆಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಮೃತಪಟ್ಟಿ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ನಿಂದ ವರದಿಯಾಗಿದೆ.
ದರ್ಖಾಸ್ ನಿವಾಸಿ ಹೇಮಾವತಿ (37 ) ಮೃತ ಮಹಿಳೆ.
ಈ ಕುರಿತು ಕೊಲೆ ಶಂಕೆ ವ್ಯಕ್ತವಾಗಿದ್ದು, ಹೇಮಾವತಿ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಪೊಲೀಸರು ವಿಚಾರಣೆಗಾಗಿ ಮೃತರ ಅಕ್ಕನ ಮಗ ಎಸೆಸ್ಸೆಲ್ಸಿ ವಿದ್ಯಾರ್ಥಿ ಅಪ್ರಾಪ್ತ ಬಾಲಕನನ್ನು ಹಾಗೂ ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ.