ಒಡಿಯೂರು, ಶ್ರೀಧಾಮ ಮಾಣಿಲ ಶ್ರೀಗಳ, ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕ ಸಂಜೀವ ಮಠಂದೂರು ಭೇಟಿ
ಪುತ್ತೂರು : ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಬುಧವಾರದಿಂದ ಆರಂಭಗೊಂಡಿದ್ದು, ಫೆ.3 ರಂದು ಈ ಪುಣ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.
ಅಲ್ಲದೆ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಬಂದರು ಹಾಗೂ ಮೀನುಗಾರಿಕಾ ಸಚಿವ ಅಂಗಾರ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಪಾಲ್ಗೊಳ್ಳಲಿದ್ದಾರೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
























