ಉಜಿರೆ :ಉಜಿರೆ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲೂಕು ಕಸಬಾ ಹೋಬಳಿ ದೇವಾಂಗ ರಸ್ತೆಯ ದಿವ್ಯಾ ಎಸ್ ಎಂಬವರು ಉಜಿರೆ ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜುನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬರದೇ, ಕಾಲೇಜಿಗೂ ಹೋಗದೇ, ಮನೆಗೂ ಹೋಗದೇ ನಾಪತ್ತೆಯಾಗಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಕಾಣೆಯಾದ ದೂರು ದಾಖಲಾದ ಕೂಡಲೆ ಕಾರ್ಯಪ್ರವೃತರಾದ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪೂರ್ ಮರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು, ವಿದ್ಯಾರ್ಥಿನಿ ಹೈದರಾಬಾದ್ ನ, ನಿಜಮಾಬಾದ್ ನ ಸಂಬಂಧಿಕರ ಮನೆಯಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಪೋಷಕರಿಗೆ ಒಪ್ಪಿಸಿದ್ದಾರೆ. ದೂರದ ಕಾಲೇಜಿಗೆ ಮನೆಯವರು ಸೇರಿಸಿದ್ದರಿಂದ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗದೆ ಯಾರಿಗೂ ತಿಳಿಸದೆ ಹೈದರಾಬಾದ್ ನ ಸಂಬಂಧಿಕರ ಮನೆಗೆ ಹೋಗಿರುವುದಾಗಿ ಪೊಲೀಸರಿಗೆ ವಿದ್ಯಾರ್ಥಿನಿ ತಿಳಿಸಿದ್ದಾಳೆ.