ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ.

ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದ್ದು, ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(25) ಎಂದು ತಿಳಿದು ಬಂದಿದೆ.

ಮಂದಿರದ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಸಹ ಸಿಬ್ಬಂದಿ ಅಲ್ಲಿಗೆ ಓಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.







































 
 

ಯೋಧನ ಸಾವು ಅಯೋಧ್ಯೆ ದೇಗುಲ ಸಂಕೀರ್ಣದಲ್ಲಿ ಇದೀಗ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಐಜಿ ಮತ್ತು ಎಸ್ಪಿ ಆಗಮಿಸಿ ಪರಿಶೀಲನೆ ನಡೆಸಿದರು. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ.

ಶತ್ರುಘ್ನ ವಿಶ್ವಕರ್ಮ ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆಯ ಕಾಜಪುರ ಗ್ರಾಮದ ನಿವಾಸಿಯಾಗಿದ್ದರು. ದೇವಸ್ಥಾನದ ಭದ್ರತೆಗಾಗಿ ಯೋಗಿ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಎಸ್‌ಎಸ್‌ಎಫ್ ಪಡೆಯನ್ನು ರಚಿಸಿತ್ತು. ಘಟನೆಗೂ ಮುನ್ನ ಶತ್ರುಘ್ನ ಮೊಬೈಲ್ ನೋಡುತ್ತಿದ್ದ ಎಂದು ಮೃತ ಯೋಧನ ಸಹೋದ್ಯೋಗಿಗಳು ತಿಳಿಸಿದ್ದಾರೆ. ಅವರು ಕೆಲವು ದಿನಗಳಿಂದ ಯಾವುದೋ ಚಿಂತೆಯಲ್ಲಿದ್ದರು ಎಂಬುದಾಗಿ ತಿಳಿಸಿದ್ದಾರೆ, ಪೊಲೀಸರು ಅವರ ಮೊಬೈಲ್ ನ್ನು ಕೂಡ ವಿಚಾರಣೆಗೆ ಕಳುಹಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top