ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಬಾಲಕ ರಿಮಾಂಡ್ ಹೋಮ್ ಗೆ

ಉಪ್ಪಿನಂಗಡಿ: ಸಮೀಪದ ಪೆರ್ನೆ ಗ್ರಾಮ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳವರೆಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ.

ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದ್ದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರು.

ಆಗ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದರಿಂದ ಆರೋಪಿಯನ್ನು ಬಂಧಿಸಲಾಗಿತ್ತು.







































 
 

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್ ಎಂಬವರನ್ನು ವಿವಾಹವಾಗಿದ್ದ ಹೇಮಾವತಿಯವರು ಗಂಡನ ಕುಡಿತದ ಚಟದಿಂದ ಬೇಸತ್ತು ಗಂಡನಿಂದ ದೂರವಾಗಿದ್ದರು. ಹಾಗೂ ವಿವಾಹ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣಾ ಹಂತದಲ್ಲಿತ್ತೆನ್ನಲಾಗಿದೆ.

ಹೊಟೇಲೊಂದರಲ್ಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದ ಈಕೆ ತನ್ನ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದರು. ಮಗನಂತಿದ್ದ ಅಕ್ಕನ ಮಗನೇ ಮೃಗೀಯ ವರ್ತನೆ ತೋರಿ ಆಕೆಯ ಸಾವಿಗೆ ಕಾರಣವಾಗಿರುವುದು ವಿಷಾದನೀಯ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top