ಬೆಂಗಳೂರು: ದರ್ಶನ್ ವಿರುದ್ಧ ವರದಿ ಪ್ರಕಟಿಸದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇದೀಗ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.
ಈ ಕುರಿತು ಕಾನೂನು ಹೋರಾಟಕ್ಕೆ ಇಳಿದಿರುವ ಕುರಿತು ಇನ್ ಸ್ಟಾಗ್ರಾಂನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ನಡೆಯುತ್ತಿದೆ. ಇತ್ತೀಚೆಗೆ ದರ್ಶನ್ ಪತ್ನಿ ತನ್ನ ಇನ್‌ಸ್ಟಾಗ್ರಾಂ ಫೋಟೋಗಳನ್ನು ಡಿಲೀಟ್ ಮಾಡಿ ಭಾರಿ ಸುದ್ದಿಯಾಗಿದ್ದರು. ಈಗ ದರ್ಶನ ಪ್ರಕರಣದ ಕುರಿತು ಕಾನೂನು ಹೋರಾಟ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದರೆ, ಎ2 ಆರೋಪಿ ನಟ ದರ್ಶನ್ ಆಗಿದ್ದಾರೆ. ಅಲ್ಲದೆ ಹಲವು ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.
ಕೊಲೆ ಆರೋಪದಲ್ಲಿ ದರ್ಶನ್ ಬಂಧವಾಗಿದ್ದರೂ ಅವರ ಪರ ಯಾವುದೇ ಕುಟುಂಬದವರು ನಿಂತಿಲ್ಲ. ಬದಲಾಗಿ ಪತ್ನಿ ವಿಜಯಲಕ್ಷ್ಮಿ ಒಬ್ಬರೇ ಅವರ ಪರವಾಗಿ ನಿಂತಿದ್ದು, ಅವರನ್ನು ಜೈಲಿನಿಂದ ಹೊರತರಲು ವಕೀಲರನ್ನು ನೇಮಿಸಿ ಒಬ್ಬಂಟಿಯಾಗಿ ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ, ಇದೀಗ ನನ್ನ, ಮಗ ಹಾಗೂ ದರ್ಶನ್ ಕುಟುಂಬಂದ ವಿರುದ್ಧ ಯಾವುದೇ ಸುಳ್ಳುಸುದ್ದಿಗಳನ್ನು ಪ್ರಕಟಿಸುವಂತಿಲ್ಲ ಎಂದು ಸ್ಟೇ ಆರ್ಡರ್ ತಂದಿದ್ದಾರೆ. ಜತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.