ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿಯರ ತಂಡ 2024-25 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10 ಕಿಮೀ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಸತತ ಮೂರನೇ ಬಾರಿಗೆ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ.
ಶ್ರವಣಬೆಳಗೊಳದ ಬಾಹುಬಲಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಈ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ.
ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್ ತೃತೀಯ ಸ್ಥಾನ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ 4ನೇ ಸ್ಥಾನ, ದ್ವಿತೀಯ ವರ್ಷದ ಡೇಟಾ ಸೈನ್ಸ್ ವಿಭಾಗದ ಅಶ್ವಿನಿ 8ನೇ ಸ್ಥಾನ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಮಂಜುಶ್ರೀ.ಎ 10 ನೇ ಸ್ಥಾನ, ದ್ವಿತೀಯ ವರ್ಷದ ಡೇಟಾ ಸೈನ್ಸ್ ವಿಭಾಗದ ಸುಪ್ರೀತಾ.ಎನ್.ಎಸ್ 18ನೇ ಸ್ಥಾನ ಹಾಗೂ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಬಿಂದುಶ್ರೀ 19ನೇ ಸ್ಥಾನ ಪಡೆದು ಮಹಿಳೆಯರ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.
ಮಹಿಳೆಯರ ವಿಭಾಗದಲ್ಲಿ ವಿಜೇತರಾದ ವಿದ್ಯಾ.ಸಿ.ಎಸ್ ಮತ್ತು ಜೀಕ್ಷಿತಾ.ಕೆ 2024-25ನೇ ಸಾಲಿನ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ 10 ಕಿಮೀ ಕ್ರಾಸ್-ಕಂಟ್ರಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.
ಕಾಲೇಜಿನ ತಂಡವು ಕಳೆದ ಮೂರು ವರ್ಷಗಳಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟವನ್ನು ಗಳಿಸಿಕೊಂಡಿದ್ದು, ಇಲ್ಲಿನ ಅನೇಕ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.