ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜೂನ್18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.

exhumedyou888@gmail.com ಇಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ವಿಮಾನ ನಿಲ್ದಾಣದ ಒಳಗಡೆ ಸ್ಪೋಟಕ ಸಾಮಗ್ರಿ ಅಡಗಿಸಿಟ್ಟಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟ ಅಗಲಿದೆ. ನೀವೆಲ್ಲ ಸಾಯಲಿದ್ದೀರಿ. ಗ್ರೂಪ್ ಕೆಎನ್ ಆರ್  ದರ ಹಿಂದಿದೆ. ಮೇ. 1ರ ಡೆಲ್ಲಿ ಸ್ಕೂಲ್ ಅಟ್ಯಾಕ್ ಕೃತ್ಯದಲ್ಲೂ ಇದೇ ಗ್ರೂಪ್ ಇತ್ತು ಎಂಬುವುದಾಗಿ ಬರೆದಿದ್ದಾನೆ.





















































 
 

ಪೊಲೀಸರು ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಇದೇ ಮಾದರಿಯ ಇಮೇಲ್ ಸಂದೇಶವನ್ನು ಒಂದೇ ದಿನ ದೇಶದ 41 ವಿಮಾನ ನಿಲ್ದಾಣಗಳಿಗೆ ಕಳಿಸಿದ್ದಾರೆ, ಒಂದೇ ಇಮೇಲ್ ಐಡಿಯಿಂದ ಸಂದೇಶ ಕಳಿಸಲಾಗಿದೆ. ಮೇ. ಮೊದಲ ವಾರದಲ್ಲಿ ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top