ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕ ಹರಿಪ್ರಸಾದ್ ಪಿ.ಕೆ. ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಒತ್ತಡ ರಹಿತ ಬದುಕನ್ನು ನಡೆಸಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಎವಿಜಿ ಶಾಲಾ ಅಧ್ಯಕ್ಷರ ವೆಂಕಟರಮಣ ಗೌಡ ಕಳುವಾಜೆ ಶುಭ ಹಾರೈಸಿದರು. ಯೋಗ ತರಬೇತಿದಾರರಾಗಿ ಲಲಿತ, ಸತೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.





























 
 

ಶಾಲಾ ಶಿಕ್ಷಕಿ ಹರ್ಷಿತಾ ಪ್ರಾರ್ಥಿಸಿದರು. ಶ್ರೇಯ ಸ್ವಾಗತಿಸಿ, ಶಿಕ್ಷಕಿ ರಾಧ ವಂದಿಸಿದರು. ಸಹ ಶಿಕ್ಷಕಿಯರಾದ ವನಿತಾ, ಸೂರ್ಯಕಲಾ, ರಂಜಿತಾ ರೈ, ಚಂದ್ರಿಕಾ, ರೀಮಾ ಲೋಬೊ, ಕುಮಾರಿ ಪ್ರಕ್ಷುತ ಹಾಗೂ ಮಕ್ಕಳು  ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದರು. ಯಶುಭ ರೈ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top