ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಮಂಡಳಿ ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋದ್ ಕುಮಾರ್ ಸಿಂಗ್ ಅವರನ್ನ ಶನಿವಾರ ರಾತ್ರಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇನ್ನು 1985ರ ಬ್ಯಾಚ್ ನಿವೃತ್ತ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ನಿಯಮಿತ ಮುಖ್ಯಸ್ಥರನ್ನು ನೇಮಿಸುವವರೆಗೆ ಅಥವಾ ಮುಂದಿನ ಆದೇಶದವರೆಗೆ ಅವರ ಸ್ಥಾನದಲ್ಲಿ ನೇಮಿಸಲಾಗಿದೆ.
ಕಳೆದ ಎರಡು ತಿಂಗಳುಗಳಿಂದ, ದೇಶದ ಎರಡು ಅತಿದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ (UGC-NET) ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC- NET)ನಲ್ಲಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪದ ಮೇಲೆ ಎಸ್ಟಿಎ ವಿವಾದದ ಮಧ್ಯದಲ್ಲಿದೆ.
























