ಹಾಲಿನ ದರ 2.10 ರೂ. ಏರಿಕೆ !

ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ನ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

ಪ್ರತಿ ಲೀಟರ್ ಹಾಲಿನ ದರ 2.10 ರೂ. ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಇದರೊಂದಿಗೆ ಗ್ರಾಹಕರಿಗೆ ಸಿಗುತ್ತಿದ್ದ 1 ಲೀಟರ್ ಪ್ಯಾಕೆಟ್ ಹಾಲು ಇನ್ಮುಂದೆ 1,050 ಎಂಎಲ್ ಹಾಗೂ ಅರ್ಧ ಲೀಟರ್ ಪ್ಯಾಕೆಟ್ ಹಾಲು 550 ಎಂಎಲ್ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ ನಲ್ಲಿ ಅಮುಲ್ ಒಂದು ಲೀಟರ್ ಗೆ 56 ರೂ., ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಭೀಮಾನಾಯ್ಕ್ ಹೇಳಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top