ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಜೂ.27 ಗುರುವಾರ ಬೆಳಿಗ್ಗೆ 11 ಕ್ಕೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕರಾದ ಎಸ್.ಎಲ್.ಭೋಜೇಗೌಡ, ಐವನ್ ಡಿ’ಸೋಜಾ, ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ, ಡಾ.ಧನಂಜಯ ಸರ್ಜಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಶೆಟ್ಟಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಆಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಹೆಚ್., ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ, ಮೀನು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣ ರಾವ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೆಂಪೇಗೌಡ ಹೆಚ್. ಉಪಸ್ಥಿತರಿರುವರು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಪ್ರಧಾನ ಭಾಷಣ ಮಾಡುವರು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.