ವಿಟ್ಲ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಎಲ್.ಎನ್.ಕೂಡೂರು (67) ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಎಲ್.ಎನ್.ಕುಡೂರು ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಪ್ರಿಯ ಪಡೆದಿದ್ದರು. ಕ್ಯಾಂಪೊ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ವಿಟ್ಲ ಬಸವನಗುಡಿ ವಿಟ್ಟಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಟಲ ವಿದ್ಯಾ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.