ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮದ 14ನೇ ಸರಣಿ ಕಾರ್ಯಕ್ರಮ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ಸೋಮಪ್ಪ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮ ಮಟ್ಟದ ಸಾಹಿತಿಗಳನ್ನ ಗುರುತಿಸಿ, ಗ್ರಾಮೀಣ ಯುವ ಮತ್ತು ವಿದ್ಯಾರ್ಥಿಗಳಿಗೆ ಸಾಹಿತ್ಯದ ಚಟುವಟಿಕೆಗಳನ್ನು ಆಯೋಜನೆ ಮಾಡುವುದರ ಮೂಲಕ ಉತ್ತಮ ಪರಿಣಾಮ ಬೀರಲು ಗ್ರಾಮ ಸಾಹಿತ್ಯ ಸಂಭ್ರಮ ಒಳ್ಳೆಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಕೊಡಿಪ್ಪಾಡಿ ಸರಕಾರಿ ಉನ್ನತೀಕರಿಸಿದ ಹಿ ಪ್ರಾ ಶಾಲೆಯ ಕು ಶಮಿತ ಅಧ್ಯಕ್ಷತೆ ವಹಿಸಿ ಮಾತನಾಡಿ, ಇದೊಂದು ಶಾಲಾ ಮಕ್ಕಳಿಗೆ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಕಾರ್ಯಕ್ರಮವಾಗಿದ್ದು, ನಮ್ಮಲ್ಲಿರುವ ಪ್ರತಿಭೆಗೆ ಗ್ರಾಮ ಮಟ್ಟದಲ್ಲಿ ಗುರುತಿಸಿ ಪ್ರೋತ್ಸಾಹಿಸುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಗ್ರಾಮ ಮಟ್ಟದ ವಿವಿಧ ಕ್ಷೇತ್ರದ ಸಾಧಕರಾದ ಬಿ. ರಾಧಾಕೃಷ್ಣ ಭಟ್ ಬಟ್ರಪ್ಪಾಡಿ, ಮನ್ಮಥ ಶೆಟ್ಟಿ, ರವೀಂದ್ರ ಆಚಾರ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ, ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅಭಿನಂದಿಸಿ ಅಭಿನಂದನಾ ಮಾತುಗಳನ್ನಾಡಿದರು.
ಚಿಗುರೆಲೆ ಸಾಹಿತ್ಯ ಬಳಗದ ಸದಸ್ಯ, ವಾರ್ತಾ ಭಾರತಿ ಪತ್ರಿಕೆಯ ಬೆಂಗಳೂರು ವರದಿಗಾರ ಇಬ್ರಾಹಿಂ ಖಲೀಲ್ ಅವರ ಪತ್ರಿಕಾ ವರದಿ ಸಾಧನೆಗಾಗಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶರೀಫ್ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಗೆ ತರಲು ಇದೊಂದು ಒಳ್ಳೆಯ ಆಲೋಚನೆಯಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ವಹಿಸಿದ್ದರು. ಸಮಾರಂಭದಲ್ಲಿ ಶಿವಮಣಿ ಕಲಾ ತಂಡದ ಮನುಕುಮಾರ್ ಶಿವನಗರ ಅವರ ಡಿಜಿಟಲ್ ವಾರ ಪತ್ರಿಕೆ ಶಿವಮಣಿ ಕಲಾರಂಗ ವನ್ನು ಗ್ರಾಮ ಪಂಚಾಯತ್ ಪಿಡಿಒ ಶರೀಫ್ ಬಿಡುಗಡೆಗೊಳಿಸಿದರು. ಉಪತಹಸಿಲ್ದಾರ್ ಸುಲೋಚನಾ ಸಾಹಿತ್ಯ ಪರಿಷತ್ತಿಗೆ 500 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಚಿಗುರೆಲೆ ಸಾಹಿತ್ಯ ಬಳಗದ ಪ್ರತೀಕ್ಷಾ ಆರ್. ಕಾವು ಸ್ವಾಗತಿಸಿ, ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಂಧ್ಯಾ ಎಸ್. ರೈ ಕಾರ್ಯಕ್ರಮ ನಿರೂಪಿಸಿ, ರಶ್ಮಿತಾ ಸುರೇಶ್ ಜೋಗಿಬೆಟ್ಟು ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸಾಹಿತ್ಯಕ್ಕೆ ಕೊಡಿಪ್ಪಾಡಿ ಗ್ರಾಮದ ಕೊಡುಗೆ ಕುರಿತು ಬಿ. ರಾಧಾಕೃಷ್ಣ ಭಟ್ ಬಟ್ರಪ್ಪಾಡಿ, ಕನ್ನಡದಲ್ಲೂ ಐ ಎ ಎಸ್ ಬರೆಯಿರಿ ಕುರಿತು ಉಪನ್ಯಾಸವನ್ನು ಪ್ರಣವ್ ಭಟ್ ನೆರವೇರಿಸಿದರು. ತದನಂತರ ಕೊಡಿಪ್ಪಾಡಿ ಮತ್ತು ಅರ್ಕ ಶಾಲೆಯ ವಿದ್ಯಾರ್ಥಿಗಳಿಗೆ ಗಣೇಶ್ ಎಸ್. ಅಧ್ಯಕ್ಷತೆಯಲ್ಲಿ ಬಾಲಕವಿಗೋಷ್ಠಿ, ಸುರೇಖಾ ರೈ ಯವರ ಅಧ್ಯಕ್ಷತೆಯಲ್ಲಿ ಬಾಲ ಕಥಾಗೋಷ್ಠಿ ಜರಗಿತು. ಉಭಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ನಂತರ ಕೊಡಿಪ್ಪಾಡಿ ಅಂಚೆ ಪಾಲಕಿ ಸಹನಾ ಎಸ್. ಎಚ್. ಅಧ್ಯಕ್ಷತೆಯಲ್ಲಿ ಸಾರ್ವಜನಿಕ ವಿಭಾಗದ ಯುವಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ ಯಶಸ್ವಿ ಗಣೇಶ್ ಸೋಮವಾರಪೇಟೆ, ದೇವಿಕಾ ಜೆ. ಜಿ. ಬನ್ನೂರು, ಉಮಾಶಂಕರಿ ಮರಿಕೆ, ಮನುಕುಮಾರ್ ಶಿವನಗರ, ವಿಂಧ್ಯಾ ಎಸ್ ರೈ, ರಶ್ಮಿತಾ ಸುರೇಶ್ ಜೋಗಿಬೆಟ್ಟು, ಗಿರೀಶ್ ಉಪ್ಪಿನಂಗಡಿ, ಅಕ್ಷತಾ ನಾಗನಕಜೆ ಭಾಗವಹಿಸಿದ್ದರು.
ಅರ್ಕ ಸ. ಹಿ. ಪ್ರಾ. ಶಾಲೆ ವಿದ್ಯಾರ್ಥಿನಿ ಕು. ಅನ್ವಿತ ಸಮಾರೋಪ ಭಾಷಣ ಮಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಸೂಕ್ತವಾದ ವೇದಿಕೆಯಾಗಿದೆ. ಕನ್ನಡವನ್ನು ಉಳಿಸಿ ಬೆಳೆಸಲು ಕನ್ನಡದ ಬಗ್ಗೆ ತಿಳಿದುಕೊಳ್ಳಬೇಕು. ಹಾಗಾಗಿ ಈ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಕ್ಕೆ ನಾನು ಆಭಾರಿಯಾಗಿದ್ದೇನೆ ಎಂದರು.
ವೇದಿಕೆಯಲ್ಲಿ ಹಿರಿಯ ಸಾಹಿತಿಗಳು ಮಧು ಪ್ರಪಂಚ ಪತ್ರಿಕೆ ಸಂಪಾದಕ ನಾರಾಯಣ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು. ವಿವಿಧ ಗೋಷ್ಠಿಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಧರ್ ಗೌಡ, ಸ್ಮಿತಾ. ಪಿ. ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ರವೀಂದ್ರ ಆಚಾರ್ಯ, ಕಿಶನ್ ಕುಮಾರ್ ಮತ್ತು ಪ್ರಶಾಂತ್ ಅರ್ಕ ಸಹಕರಿಸಿದ್ದರು. ಗೋಷ್ಠಿಗಳನ್ನು ರಶ್ಮಿತಾ ಸುರೇಶ್ ಜೋಗಿಬೆಟ್ಟು, ಅಪೂರ್ವ ಕಾರಂತ್, ಪ್ರತೀಕ್ಷಾ ಆರ್ ಕಾವು, ಅಕ್ಷತಾ ನಾಗನಕಜೆ ನಿರ್ವಹಿಸಿದರು. ಕಾರ್ಯಕ್ರಮ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆಗೈದು ನಾಡಗೀತೆಯೊಂದಿಗೆ ಆರಂಭಗೊಂಡು ರಾಷ್ಟ್ರ ಗೀತೆಯೊಂದಿಗೆ ಸಮಾಪನಗೊಂಡಿತು.