ಉಳ್ಳಾಲ : ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ,ಪರಿಶೀಲನೆ ಮಾಡಿದರು.
ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಲಾಯಿತು.
ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರುವಂತೆ ವಿನಂತಿ ಹಾಗೂ ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕರಿಗಳಿಗೆ ಸೂಚಿಸಿದ್ದೇನೆ ಹಾಗೂ ಸಾಧ್ಯವಾಗುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.