ಬೆಂಗಳೂರು: ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪೆನಿಗಳು ಸತತ ನಾಲ್ಕನೇ ಬಾರಿಗೆ ವಾಣಿಜ್ಯ ಎಲ್.ಪಿ.ಜಿ ಸಿಲಿಂಡರ್ ಬೆಲೆ ಇಳಿಸಿವೆ. ಈ ಮೂಲಕ ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್ ನ್ಯೂಸ್ ಕೊಟ್ಟಿದೆ.
ಗೃಹಬಳಕೆ ಸಿಲಿಂಡರ್ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಇಂಡಿಯನ್ ಆಯಿಲ್ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ಮೆಟ್ರೊ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಆದರೆ 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.
ಜುಲೈ 1ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂಪಾಯಿಗೆ ಇಳಿಯಲಿದೆ. ಜೂನ್ ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂಪಾಯಿ ಇತ್ತು. ಇದೀಗ 31 ರೂಪಾಯಿ ಇಳಿಕೆಯಾಗಿದೆ. ದಿಲ್ಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ ವಾಣಿಜ್ಯ ಬಳಕೆಯ 14.5 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿಗೆ ಇಳಿಕೆಯಾಗಿದೆ.