ಪುತ್ತೂರು: ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಗೆ ಇಂಗ್ಲೀಷ್ ಮಾಧ್ಯಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಚಾಲನೆ ನೀಡಿ ಮಾತನಾಡಿ, ಇಲ್ಲಿನ ಪ್ರತೀಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು, ಕನ್ನಡದ ಜೊತೆ ಆಂಗ್ಲ ಭಷೆಯ ಜ್ಞಾನವೂ ಇಂದಿನ ಕಾಲದ ಅಗತ್ಯ ಬೇಡಿಕೆಯಾಗಿದೆ ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸರಕರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಆರಂಭ ಮಾಡುತ್ತಿದೆ, ಹಳ್ಳಿಯ ಕಟ್ಟಕಡೇಯ ವ್ಯಕ್ತಿಯ ಮಕ್ಕಳೂ ಇಂಗ್ಲೀಷ್ ಕಲಿತರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯವಾಗುತ್ತದೆ ಎಂದ ಅವರು, ಕರ್ನಾಟಕದಾದ್ಯಂತ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗೆ ಸರಕಾರ ಅನುಮತಿ ನೀಡುತ್ತಿದೆ. ಕೆಪಿಎಸ್ ಶಾಲೆಗಳಲ್ಲಿ ಮಾತ್ರ ಇದ್ದ ಈ ವ್ಯವಸ್ಥೆ ಈಗ ಎಲ್ಲಾ ಶಾಲೆಗಳಿಗೂ ವಿಸ್ತರಣೆಯಾಗುತ್ತಿದೆ. ಆಂಗ್ಲ ಮಾಧ್ಯಮ ತರಗತಿಗೆ ಪುತ್ತೂರಿನಿಂದ ಎರಡು ಮತ್ತು ಬಂಟ್ವಾಳ ವ್ಯಾಪ್ತಿಯಿಂದ ಎರಡು ಅರ್ಜಿಗಳು ಮಾತ್ರ ಬಂದಿದೆ. ಬೇಡಿಕೆಗಳು ಬಂದಲ್ಲಿ ಇನ್ನೂ ಹೆಚ್ಚಿನ ಶಾಲೆಗಳಿಗೆ ಅನುಮತಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್., ನಗರಸಭೆ ಸದಸ್ಯ ಮನೋಹರ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಶಾಲಾ ಸ್ಥಾಪಕಾಧ್ಯಕ್ಷ, ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋಪಾಲಕೃಷ್ಣ ಭಟ್, ಟ್ರಸ್ಟ್ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಶಿವ ಪ್ರಸಾದ್, ಸಮೂಹ ಸಂಪನ್ಮೂಲ ವ್ಯಕ್ತಿ ಶಶಿಕಲಾ, ಟ್ರಸ್ಟಿ ನಳಿನಿ.ಪಿ ಶೆಟ್ಟಿ, ವಿದ್ಯಾಭಿಮಾನಿ ದಿನೇಶ್ ಕಾಮತ್, ಟ್ರಸ್ಟಿ ವೆಂಕಟರಮಣ ಭಟ್, ಟ್ರಸ್ಟಿ ವೆಂಕಟ್ ರಾಜ್, ಯುವಕ ಮಂಡಲದ ಅಧ್ಯಕ್ಷ ರೋಷನ್ ರೆಬೆಲ್ಲೋ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಆಚಾರ್, ಎಸ್ಡಿಎಂಸಿ ಉಪಾಧ್ಯಕ್ಷೆ ಪವಿತ್ರ ಉಪಸ್ಥಿತರಿದ್ದರು..
ಮುಖ್ಯ ಶಿಕ್ಷಕಿ ಮರಿಯಾ ಅಶ್ರಫ್ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್, ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಜ್, ಶಿಕ್ಷಕರು ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳು ಸಹಕರಿಸಿದರು.