ಹಾಸನ: ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದ 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ.
ಅಕ್ಷತಾ (13) ಮೃತ ಬಾಲಕಿ, ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದರು. ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದ ಈಕೆಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೂ ಅಕ್ಷತಾ ಆರೋಗ್ಯದಲ್ಲಿ ಚೇತರಿಕೆ ಕಾಣದೇ ಮತ್ತೊಂದು ಆಸ್ಪತ್ರೆಗೆ ದಾಖಲಿಸಿದ್ದರು ಎನ್ನಲಾಗಿದೆ. ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗುವಂತೆ ಖಾಸಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ನಂತರ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.