ಪುತ್ತೂರು: ರಾಜ್ಯ ಸರಕಾರದ ಹಾಲಿನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪುತ್ತೂರು ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಸಹಾಯಕ ಆಯುಕ್ತರ ಕಚೇರಿ ಮೂಲಕ ಮನವಿ ಇಂದು ನೀಡಲಾಯಿತು.
ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ, ಬಿಜೆಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೇತೃತ್ವದಲ್ಲಿ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾಗೌರಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ, ನಗರಮಂಡಲ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್. ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷೆ ಮೀನಾಕ್ಷಿ ಮಂಜುನಾಥ್ , ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶೋಧ ಕೆ ಗೌಡ, ನಗರ ಸಭಾ ಸದಸ್ಯೆ ಗೌರಿ ಬನ್ನೂರು, ಜಯಂತಿ ನಾಯಕ್ ನಿಕಟಪೂರ್ವ ಜಿಲ್ಲಾ ಬಿಜೆಪಿ ಕಾರ್ಯದರ್ಶಿ,ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳು ಆಶಾ ಭಗವಾನ್, ಸುಮತಿ, ಸರೋಜಿನಿ , ಸುಜಾತ, ಸ್ವರ್ಣಲತಾ ಹೆಗ್ಡೆ ಉಪಸ್ಥಿತರಿದ್ದರು.