ಬೆಳ್ತಂಗಡಿ : ಖಾಸಗಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬೊಳ್ಮನಾರಿನ ವೆಂಕಟೇಶ್ ಎಂಬವರ ಪುತ್ರಿ ಅನಿತಾ ಮೃತಪಟ್ಟವರು.
ಬೆಳ್ತಂಗಡಿಯ ಖಾಸಗಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿರುವ ಅನಿತಾ ಜೂನ್ 29ರಂದು ತಡರಾತ್ರಿ ವಿಷ ಪದಾರ್ಥ ಸೇವಿಸಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬುಧವಾರ ಮಧ್ಯರಾತ್ರಿ ಮೃತಪಟ್ಟಿದ್ದಾಳೆ.
ಅನಿತಾ ಬರೆದ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.