ರೇಣುಕಾ ಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜು.18 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದ್ದು, ಜು.18 ರ ವರೆಗೆ ಅವಧಿ ವಿಸ್ತರಿಸಿ ಕೋರ್ಟ್‍ ಆದೇಶ ನೀಡಿದೆ.

ಈ ಮೂಲಕ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸಹಿತ ಉಳಿದ ಆರೋಪಿಗಳಿಗೆ ಜು.4 ರ ತನಕ ಇದ್ದ ನ್ಯಾಯಾಂಗ ಬಂಧನ ವಿಸ್ತರಣೆಯಿಂದ ಸಂಕಷ್ಟ ಎದುರಾಗಿದೆ.

ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್‌ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್‌ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.



































 
 

ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಹಾಗೂ ಅವರ ಸಹಚರರಿಗೆ ಜೈಲೇ ಗತಿಯಾಗಿದೆ. ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿ ಇರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಾಜರು ಪಡಿಸಲಾಯಿತು. ಜಡ್ಜ್ ಎಲ್ಲರ ಹೆಸರು ಕರೆಯುತ್ತಿದ್ದಂತೆಯೇ ಕೈಎತ್ತಿ ಹಾಜರಿ ಖಾತರಿಪಡಿಸಿದರು. ದರ್ಶನ್ ಅವರು ಜೈಲಿನಿಂದ ಹೊರಬರಲಿ ಎಂಬುದು ಅಭಿಮಾನಿಗಳು ಮತ್ತು ಆಪ್ತರ ಬಯಕೆ ಆಗಿದೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಜಾಮೀನು ಸಿಗುವುದು ಸದ್ಯಕ್ಕೆ ಕಷ್ಟವಾಗಿದೆ.

ದರ್ಶನ್ ಸ್ನೇಹಿತೆಯಾದ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top