ಬೆಂಗಳೂರು: ಕಂಡಕ್ಟರ್ ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರ ನಡುವೆ ಚಿಲ್ಲರೆಗಾಗಿ ಜಗಳ ನಡೆಯುತ್ತಲೇ ಇರುತ್ತದೆ. ಜೊತೆಗೆ ಟಿಕೆಟ್ ರಹಿತ ಪ್ರಯಾಣ ಮುಂತಾದ ಸಮಸ್ಯೆಗಳನ್ನು ದೂರ ಮಾಡಲು ಇನ್ನು ಮುಂದೆ ಕೆ.ಎಸ್.ಆರ್.ಟಿ.ಸಿ. ಯಲ್ಲೂ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ.
ಖಾಸಗಿ ಕಂಪೆನಿಯಿಂದ ಒಂದು ಮಷಿನ್ ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್ ಗಳ ಖರೀದಿಗೆ ಕೆ.ಎಸ್.ಆರ್.ಟಿ.ಸಿ. ಮುಂದಾಗಿದೆ. ಇದರಿಂದ ಇನ್ನು ಮುಂದೆ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ.
ಈ ನೂತನ ಮಷಿನ್ ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು ಎನ್ನಲಾಗಿದೆ. ಸದ್ಯ ಈಗ ಇರುವ ಮಷಿನ್ ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್ ನಿಂದ ಇದು ತಪ್ಪಲಿದೆ ಎಂದು ನಿಗಮ ತಿಳಿಸಿದೆ.