ರಾಜ್ಯ ಸರಕಾರದಿಂದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ | ಬ್ಯಾಗ್, ಯೂನಿಫಾರ್ಮ್ ಉಚಿತ ವಿತರಣೆ

ಬೆಂಗಳೂರು: ರಾಜ್ಯ ಸರಕಾರ ಈಗಾಗಲೇ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸುವ ಕುರಿತು ಆದೇಶ ನೀಡಿದ ಬೆನ್ನಲ್ಲೇ ಅಂಗನವಾಡಿ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ ಮಕ್ಕಳಿಗೆ ರಾಜ್ಯ ಸರಕಾರದಿಂದ ಬ್ಯಾಗ್, ಯೂನಿಫಾರ್ಮ್ ಉಚಿತವಾಗಿ ವಿತರಿಸುವುದು.

ಈ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಂಗಳೂರಿನ ಗೃಹಕಚೇರಿಯಲ್ಲಿ ಭೇಟಿ ಮಾಡಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ್ದರು.

ಮನವಿ ಸ್ವೀಕರಿಸಿದ ಸಚಿವೆ, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ಸರಕಾರ ತೀರ್ಮಾನ ಕೈಗೊಂಡಿದ್ದು, ಕಾರ್ಯಕರ್ತೆಯರು ಹಾಗೂ ಮಕ್ಕಳ ಹಿತದೃಷ್ಟಿಯಿಂದ ಸರಕಾರ ಈ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.



































 
 

ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೂ ಒಪ್ಪಿಗೆ ಸೂಚಿಸಿದ್ದಾರೆ. ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಹಿತಿ ನೀಡಿದರು. ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top