ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ : ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

ಪುತ್ತೂರು: ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧದಿಂದಾಗುವ ಸಮಸ್ಯೆಯ ಕುರಿತು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಮನವಿ ನೀಡಿದೆ.

ದೇವಸ್ಯ- ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧದಿಂದಾಗಿ ಒಳಮೊಗ್ರು, ಆರ್ಯಾಪು, ಬೆಟ್ಟಂಪಾಡಿ, ಬಲ್ನಾಡು ಗ್ರಾಮದ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಯಾಗಿದೆ. ಒಳಮೊಗ್ರು ಗ್ರಾಮದ ಒಂದು ಹಳ್ಳಿ ಸಂಪರ್ಕ ಕಡಿದು ಕೊಂಡಂತಾಗಿದೆ. ಆದ್ದರಿಂದ ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಜಿಲ್ಲಾ ಎಸ್.ಟಿ ಮೋರ್ಛ ಅಧ್ಯಕ್ಷ ಹರೀಶ್ ಬಿಜತ್ರೆ , ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಸಂಚಾಲಕ ರಾಜೇಶ್ ರೈ ಪರ್ಪುಂಜ, ಅಜಿತ್ ರೈ ಹೊಸಮನೆ, ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ ಸೇರ್ತಾಜೆ, ಮಹೇಶ್ ರೈ ಕೇರಿ ಉಪಸ್ಥಿತರಿದ್ದರು.



































 
 

ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು, ಈ ವಿಚಾರವನ್ನು ಈಗಾಗಲೇ ಆ ಭಾಗದ ಬಿಜೆಪಿ ಪ್ರಮುಖರು ನನ್ನ ಗಮನಕ್ಕೆ ತಂದಿದ್ದು ಈ ಬಗ್ಗೆ ಬದಲಿ ಕ್ರಮವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇವತ್ತು ನಾನು ಖುದ್ದು ಮಾತನಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಹೇಳುತ್ತೇನೆ ಎಂದು ಭರವಸೆ ನೀಡಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top