ಪುತ್ತೂರು : ಪುತ್ತೂರು ನೆಹರು ನಗರದ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವದ ನೇಮೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.
ನೇಮೋತ್ಸವದ ಅಂಗವಾಗಿ ರಾತ್ರಿ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟು ಕಲ್ಲೇಗ ದೈವಸ್ಥಾನವನ್ನು ತಲುಪಿತು. ಬಳಿಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಕರ್ಷಕ ಸುಡ್ಡಮದ್ದು ಪ್ರದರ್ಶನಗೊಂಡಿತು.
ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅಧ್ಯಕ್ಷ ಅಜಿತ್ ಕುಮಾರ್ ಜೈನ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಭಕ್ತಾದಿಗಳು ಪಾಲ್ಗೊಂಡಿದ್ದರು.
ಮಧ್ಯಾಹ್ನ 10 ಸಾವಿರಕ್ಕೂ ಅಧಿಕ ಮಂದಿಗೆ ಅನ್ನಸಂತರ್ಪಣೆ ಜರಗಿತು.