ನೆಲ್ಯಾಡಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಸದಸ್ಯರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಾಲಕೃಷ್ಣ ಬಾಣಜಾಲು, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಮಲೆನಾಡು ಜನಹಿತ ಸಂಘಟನೆಯ ಕಿಶೋರ್ ಶಿರಾಡಿ ನೇಮಕಗೊಂಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
























