ಸೂರತ್‍ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು

ಸೂರತ್: ಭಾರೀ ಮಳೆಯಿಂದಾಗಿ ಸೂರತ್‍ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಮೃತಪಟ್ಟು, ಹಲವಾರು ಮಂದಿ ಕಟ್ಟಡದ ಅಡಿಯಲ್ಲಿ ಸಿಲಿಕೊಂಡಿರುವ ಘಟನೆ ನಡೆದಿದೆ.

ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ.

ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಕಟ್ಟಡದ ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





















































 
 

8 ವರ್ಷಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಈ ಕಟ್ಟಡ ಬಹುತೇಕ ಶಿಥಿಲಾವಸ್ಥೆಯಲ್ಲಿತ್ತು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಟ್ಟಡ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top