ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ಉಡುಪಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.