ಮಂಗಳೂರು: ಅಥೆಂಟಿಕ್ ಓಪನ್ ಟ್ರೆಷರ್ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ.
ಸುರತ್ಕಲ್ ನ ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಿಶ ಮಿಲ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅವಘಡದಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.