ಉಡುಪಿ : ಮನೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಘಟನೆ ಉಡುಪಿ ತಾಲೂಕಿನ ಅಂಬಲಪಾಡಿಯ ಗಾಂಧಿನಗರದಲ್ಲಿ ನಡೆದಿದೆ.
ಬೆಂಕಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ ಹೆಂಡತಿಯನ್ನು ಅಗ್ನಿಶಾಮಕ ಸಿಬ್ಬಂದಿ ವಿನಾಯಕ್ ರಕ್ಷಿಸಿದ್ದರು. ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿಗೆ ಗಂಭೀರ ಗಾಯಗಳಾಗಿದ್ದವು. ಇಬ್ಬರಿಗೂ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ರಮಾನಂದ ಶೆಟ್ಟಿಯವರು ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಶ್ವಿನಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಸ್ಥಳಕ್ಕೆ ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಕಿಯ ಜ್ವಾಲೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.