ಪುತ್ತೂರು: ವಕೀಲರ ಸಂಘದಿಂದ ಪ್ರತಿಭಟನೆ

ಪುತ್ತೂರು: ಪುತ್ತೂರು ವಕೀಲರ ಸಂಘದಿಂದ ಬುಧವಾರ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಯಿತು.

ಮಂಗಳೂರಿನ ಯುವ ವಕೀಲ ಕುಲ್‌ದೀಪ್ ಶೆಟ್ಟಿ ಅವರ ಮೇಲಿನ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಮಾತನಾಡಿ, ಕುಲದೀಪ್ ಶೆಟ್ಟಿ ಅವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ. ವಕೀಲ ಕುಲದೀಪ್‌ಗೆ ಹಲ್ಲೆ ನಡೆಸಿದ್ದು ಅಲ್ಲದೇ, ಶಿಷ್ಠಾಚಾರ ತೋರದೆ ಅವರ ತಂದೆ ತಾಯಿಗೂ ಹಲ್ಲೆ ನಡೆಸಿದ್ದಾರೆ. ಪೊಲೀಸರ ಈ ವರ್ತನೆಯನ್ನು ಪುತ್ತೂರು ವಕೀಲರ ಸಂಘ ಖಂಡಿಸುತ್ತದೆ ಎಂದರು.



































 
 

ವಕೀಲರ ಸಂಘದ ಮಾಜಿ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ದೇವಾನಂದ ಮಾತನಾಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಜತೆ ಕಾರ್ಯದರ್ಶಿ ಸೀಮಾ ನಾಗರಾಜ್, ಖಜಾಂಜಿ ಶ್ಯಾಮಪ್ರಸಾದ್ ಕೈಲಾರ್ ಸಹಿತ ವಕೀಲರ ಸಂಘದ ಸದಸ್ಯರು ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಹಾಯ ಕಮೀಷನರ್ ಕಚೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top