ಮಾಣಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಣಿಲ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ಉನ್ನತೀಕರಣಕ್ಕಾಗಿ ವಿಶೇಷ ತರಬೇತಿ ಕಾರ್ಯಕ್ರಮ ಸೋಮವಾರ ಶಾಲೆಯಲ್ಲಿ ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಆರೋಗ್ಯ ಇಲಾಖೆ ವತಿಯಿಂದ ಕುಷ್ಠ ರೋಗ ಹಾಗೂ ಗಳಗಂಡ ರೋಗ (ಗಾಯ್ಟರ್) ನಿರ್ಮೂಲನೆ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ. ಜಿ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಪು ವಲಯ ಮೇಲ್ವಿಚಾರಕ ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲ ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆ ಕಲ್ಲು, ಎಸ್‌ಡಿಎಂಸಿ ಸದಸ್ಯರಾದ ವಿಷ್ಣು ಕನ್ನಡಗುಳಿ , ಜ್ಞಾನ ವಿಕಾಸ ಯೋಜನೆಯ ಸಮನ್ವಯಾಧಿಕಾರಿ ವಿಜಯಲಕ್ಷ್ಮೀ, ಪೆರುವಾಯಿ ಹಾಗೂ ಉಕ್ಕುಡ ಗ್ರಾ.ಯೋ ಕಾರ್ಯದರ್ಶಿ ರಮೇಶ್, ಜ್ಞಾನವಿಕಾಸ ಯೋಜನೆಯ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಕಿ ಕುಸುಮ, ವಿಟ್ಲ ಹಾಗೂ ಪೆರುವಾಯಿ ಆರೋಗ್ಯ ಕೇಂದ್ರದ ಪ್ರಾ. ಆ. ಸುರಕ್ಷಾಧಿಕಾರಿಗಳು ಭಾಗವಹಿಸಿದ್ದರು.
ಪರಮೇಶ್ವರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಭುವನೇಶ್ವರ್ ಸಿ ಸ್ವಾಗತಿಸಿದರು. ಶಿಕ್ಷಕ ಸುಧೀಶ್ ಕೆ ವಂದಿಸಿದರು. ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.